ಮೈಸೂರು

ಓಲಾ ಕಂಪನಿ ವಿರುದ್ಧ ಚಾಲಕರ ಅನಿರ್ದಿಷ್ಟಾವಧಿ ಪ್ರತಿಭಟನೆ

ಮೈಸೂರು,ಸೆ.24:- ಓಲಾ ಕಂಪನಿ ವಿರುದ್ಧ ಅರಮನೆ ನಗರಿ ಸಾರಥಿ ಸೇನೆ ಕಾರ್ಮಿಕರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ.

ಲಕ್ಷ್ಮೀಪುರಂನ ಓಲಾ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆಯಲ್ಲಿಂದು ಪಾಲ್ಗೊಂಡ ಪ್ರತಿಭಟನಾಕಾರರು ಓಲಾ ಕಂಪನಿ ಚಾಲಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಚಾಲಕರ ನಿರ್ವಹಣೆ ಹಾಗೂ ಬಾಡಿಗೆ ವಿಚಾರದಲ್ಲಿ ಕಂಪನಿಯು ಅನ್ಯಾಯ ಮಾಡುತ್ತಿದೆ ಎಂದರಲ್ಲದೇ, ಕೂಡಲೇ ಎಲ್ಲಾ ಚಾಲಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಚಾಲಕರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ 50ಕ್ಕೂ ಅಧಿಕ ಚಾಲಕರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: