ಮೈಸೂರು

ಕಲಾವಿದ ಮಂಜುನಾಥ ಬೆಳಕೆರೆ ನಿಧನ ರಂಗಭೂಮಿಗೆ ತುಂಬಲಾರದ ನಷ್ಟ: ವಸಂತ ಶೆಟ್ಟಿ ಬೆಳ್ಳಾರಿ

ಹಿರಿಯ ಕಲಾವಿದ ಮಂಜುನಾಥ ಬೆಳಕೆರೆಯವರ ನಿಧನದಿಂದ ರಂಗಭೂಮಿಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರು ಕಳೆದ 30-35 ವರ್ಷಗಳ ರಂಗಾಯಣದಲ್ಲಿ ಸೇವೆ ಸಲ್ಲಿಸುವ ಮೂಲಕ ಅಪಾರ ಕೀರ್ತಿ ಮತ್ತು ಜನಮನ್ನಣೆಯನ್ನು ಗಳಿಸಿದ್ದರು ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರಿ ಅವರು ವಿಷಾದ ವ್ಯಕ್ತಪಡಿಸಿದರು.

ಅವರು, ಭಾನುವಾರ ಮೈಸೂರಿನ ಡೆಲ್ಲಿ ಕರ್ನಾಟಕ ಸಂಘದಿಂದ ಏರ್ಪಡಿಸಲಾಗಿದ್ದ ಶ್ರದ್ಧಾಂಜಲಿ ಸಭೆಯನ್ನುದ್ದೇಶಿಸಿ ಮಾತಾಡಿ, ಸಂಘದಿಂದ ಮೃತರ ಕುಟುಂಬದವರಿಗೆ ಸಹಾಯ ಮಾಡುವ ಭರವಸೆಯನ್ನು ನೀಡಿ, ಕಲಾವಿದರಿಗೆ ಸರ್ಕಾರದಿಂದ ಯಾವುದೇ ಸವಲತ್ತು ಇಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ವೃತ್ತಿಪರ ಕಲಾವಿದರಿಗೆ ಸರ್ಕಾರಿ ನೌಕರರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಮನವಿ ಮಾಡಿದರು. ಶ್ರದ್ಧಾಂಜಲಿ ಸಭೆಯಲ್ಲಿ ಎಂ.ಆಶಾಲತಾ ಹಾಗೂ ಇತರರು ಭಾಗವಹಿಸಿದ್ದರು.

Leave a Reply

comments

Related Articles

error: