ಮೈಸೂರು

ಸೆ.26ರಂದು ಪ್ರೊ.ಗುರುಬಸವರಾಜ್ ಅವರ ಅಭಿನಂದನಾ ಸಮಾರಂಭ

ಮೈಸೂರು,ಸೆ.24 : ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ಪ್ರಸಕ್ತ ಸಾಲಿನ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಪಾತ್ರರಾದ ಪ್ರೊ.ಬಿ.ಗುರುಬಸವರಾಜ್ ಅವರ ಅಭಿನಂದನಾ ಸಮಾರಂಭವನ್ನು ಆಯುರ್ವೇದ ಪ್ರಚಾರ ಪರಿಷತ್ ಟ್ರಸ್ಟ್ ವತಿಯಿಂದ ಸೆ.26ರ ಸಂಜೆ 5 ಗಂಟೆಗೆ ಕಸಾಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಮಾಜಿ ಸಚಿವ ಎಂ.ಶಿವಣ್ಣ ಉದ್ಘಾಟಿಸುವರು, ವಿಮರ್ಶಕ ಮಲೆಯೂರು ಗುರುಸ್ವಾಮಿ, ಡಾ.ಎಂ.ಜಿ.ಆರ್ ಅರಸ್ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಡಾ.ವಿ.ಲಕ್ಷ್ಮೀನಾರಾಯಣ, ಚುಟುಕು ಸಾಹಿತ್ಯಪರಿಷತ್ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಎಂ.ಚಂದ್ರಶೇಖರ್, ಹಿರಿಯ ಸ್ವಾತಂತ್ರ್ಯಹೋರಾಟಗಾರ ಡಾ.ಎಂ.ಜಿ.ಕೃಷ್ಣಮೂರ್ತಿ ಪಾಲ್ಗೊಳ್ಳಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ ವಹಿಲಿಸದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

comments

Related Articles

error: