ಮೈಸೂರು

ಜಾಂಬೂರಿ ಉತ್ಸವ ಸಿದ್ಧತೆ ಪರಿಶೀಲಿಸಿದ ಸಚಿವರು

17ನೇ ರಾಷ್ಟ್ರೀಯ ಜಾಂಬೂರಿ ಉತ್ಸವ ನಡೆಯಲಿರುವ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಅಡಕನ ಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ  ವಿ.ಪಿ. ದೀನದಯಾಳು ನಾಯ್ಡು ನಗರಕ್ಕೆ ಸೋಮವಾರ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಭೇಟಿ ನೀಡಿ ಸಿದ್ಧತೆಯ ಪರಿಶೀಲನೆ ನಡೆಸಿದರು.

ಡಿ.29ರಿಂದ ಆರಂಭಗೊಳ್ಳಲಿರುವ ಜಾಂಬೂರಿ ಉತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ವಿವಿಧ ರಾಜ್ಯಗಳಿಂದಾಗಮಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ ಸಮುದಾಯ ಹಾಗೂ ತರಬೇತುದಾರರಿಗೆ ಅವಶ್ಯಕವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ವ್ಯವಸ್ಥೆಗಳು ಯಾವ ರೀತಿಯಲ್ಲಿ ಸಿದ್ಧಗೊಳ್ಳುತ್ತಿವೆ ಎಂಬುದನ್ನು ಸಚಿವರು ಪರಿಶೀಲಿಸಿದರಲ್ಲದೇ, ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭ ಸಂಸದ ಧ್ರುವನಾರಾಯಣ ಅವರು ಸಚಿವರ ಜೊತೆಗಿದ್ದರು.

Leave a Reply

comments

Related Articles

error: