ಸುದ್ದಿ ಸಂಕ್ಷಿಪ್ತ

ಮಹಾರಾಣೀಸ್ ನ ‘ಪ್ರತಿಭಾ ಪುರಸ್ಕಾರ’ 29.

ಮೈಸೂರು,ಸೆ.27 : ಮಹಾರಾಣಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಸೆ.29ರ ಬೆಳಗ್ಗೆ 9.30ಕ್ಕೆ ಕಾಲೇಜಿನ ಕೆಂಪನಂಜಮ್ಮಣ್ಣಿ ಸಭಾ ಮಂಟಪದಲ್ಲಿ ಏರ್ಪಡಿಸಲಾಗಿದೆ.

ಶಾಸಕ ಎಲ್.ನಾಗೇಂದ್ರ ಉದ್ಘಾಟಿಸುವರು.ವಿದಾನ ಪರಿಷತ್ ಮಾಜಿ ಸದಸ್ಯ ಮಧುಸೂದನ್ ಶೌಚಾಲಯ ಉದ್ಘಾಟಿಸುವರು. ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ, ಮಹಾನಗರ ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಉಪಪ್ರಾಂಶಪಾಲೆ ವಸಂತಕುಮಾರಿ ಹಾಜರಿರಲಿದ್ದಾರೆ. ಪ್ರಾಚಾರ್ಯರಾದ ಪಿ.ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

 

Leave a Reply

comments

Related Articles

error: