ಕರ್ನಾಟಕ

ಅ.1ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯ

ಬೆಂಗಳೂರು (ಸೆ.26): ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸಲು ಮತ್ತು ಅವರಲ್ಲಿ ಸ್ಥೈರ್ಯವನ್ನು ತುಂಬುವ ಉದ್ಧೇೀಶದಿಂದ ಜಿಲ್ಲಾ ಮಟ್ಟದ ಆದಿಕಾರಿಗಳೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯಲ್ಲಿ ಅಕ್ಟೋಬರ್ 1 ರಂದು ಗ್ರಾಮವಾಸ್ತವ್ಯ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರು ತಿಳಿಸಿದರು.

ಅವರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಕ್ಟೋಬರ್ 1 ರಂದು ಬೆಳಿಗ್ಗೆ 11 ಗಂಟೆಯಿಂದ ಬನ್ನೇರುಘಟ್ಟದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀ ಡಿ.ದೇವರಾಜ್ ಅರಸ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನೆಡೆಸುವುದರಿಂದ ಆರಂಭವಾಗುವ ಅವರ ಪ್ರವಾಸ ಹಲವು ಇಲಾಖೆಗಳ ವಿವಿಧ ಯೋಜನೆಗಳನ್ನು ಖುದ್ದಾಗಿ ಬೇಟಿ ನೀಡುವ ಮೂಲಕ ಅಕ್ಟೋಬರ್ 2 ರಂದು ಬೆಳಿಗ್ಗೆ ಅಲ್ಲಿಯೇ ಗಾಂಧೀ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.

ಈ ಸಮಯದಲ್ಲಿ ಜಿಗಣಿ ಹೋಬಳಿ ವ್ಯಾಪ್ತಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಗ್ರಾಮ ವಾಸ್ತವ್ಯದ ಸಮಯದಲ್ಲಿ 500ಕ್ಕೂ ಹೆಚ್ಚು ಪಿಂಚಣಿ ಪ್ರಮಾಣ ಪತ್ರಗಳು, ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಸೇರಿದಂತೆ ಹಲವು ಸೌವಲತ್ತುಗಳನ್ನು ವಿತರಿಸಲು ಯೋಜಿಸಲಾಗಿದೆ. ಸ್ಥಳೀಯವಾಗಿ ಸಾರ್ವಜನಿಕರು ಸಲ್ಲಿಸುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು.

ಅಕ್ಟೋಬರ್ 1 ರಂದು ಅಪರಾಹ್ನದ ನಂತರ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಗಣಿ ಸರ್ಕಾರಿ ಪ್ರಾಥಮಿಕ ಮತ್ತು ಹಿರಿಯ ಶಾಲೆಗೆ ಬೇಟಿ ನೀಡಿ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಸಮಾಲೋಚನೆ ಮತ್ತು ಕುಂದುಕೊರತೆಗಳನ್ನು ಪರಿಶೀಲಿಸುವುದು. ಅಂದು ಸಂಜೆ 4 ಗಂಟೆಗೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು ಮತ್ತು ಪರಿಶಿಷ್ಟ ಜಾತಿ/ಪಂಗಡ ಕಾಲೋನಿಗಳಿಗೆ ಬೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚಿಸುವುದು ಮತ್ತು ಅಂದು ರಾತ್ರಿ ಶಿವನಹಳ್ಳಿಯ ರಾಮಕೃಷ್ಣ ಆಶ್ರಮದಲ್ಲಿ ವಾಸ್ತವ್ಯವವನ್ನು ಮಾಡಲಾಗುತ್ತದೆ.

ಅಕ್ಟೋಬರ್ 2 ರಂದು ಬೆಳಿಗ್ಗೆ 9:30 ಗಂಟೆಗೆ ಜಿಗಣಿಯ ನಿತ್ಯಾನಂದ ಶಾಲಾ ಆವರಣದಲ್ಲಿ ಆಯೋಜಿಸಲಾಗಿರುವ ಮಹಾತ್ಮ ಗಾಂಧಿ ಜಯಂತಿಯಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪಾಲ್ಗೊಂಡು ನಂತರ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನ ಕುರಿತು ಸಭೆ ನೆಡೆಸಲಾಗುವುದು.

ಈ ಗ್ರಾಮ ವಾಸ್ತವ್ಯದಲ್ಲಿ ಚರ್ಚಿಸಿದ ಮತ್ತು ಕೈಗೊಂಡ ಕ್ರಮಗಳ ಕುರಿತು ಮತ್ತೇ ಎರಡು ತಿಂಗಳ ನಂತರ ಇದೇ ಗ್ರಾಮಗಳಿಗೆ ಬೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಹೇಳಿದರು. (ಎನ್.ಬಿ)

Leave a Reply

comments

Related Articles

error: