ಸುದ್ದಿ ಸಂಕ್ಷಿಪ್ತ

ಅ.2ರಂದು ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ

ಹಾಸನ (ಸೆ. 28): ಬೇಲೂರು ತಾಲ್ಲೂಕು ಪರಿಶಿಷ್ಠ ಜಾತಿ/ ಪರಿಶಿಷ್ಠ ವರ್ಗಗಳ ಜನಾಂಗಗಳ ಸಮಸ್ಯೆ ಮತ್ತು ಹಿತರಕ್ಷಣೆಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಹಿತರಕ್ಷಣಾ ಸಮಿತಿ ಸಭೆಯನ್ನು ತಹಸೀಲ್ದಾರರು ಹಾಗೂ ದಂಡಾಧಿಕಾರಿಗಳು ಬೇಲೂರು ಅವರ ಅಧ್ಯಕ್ಷತೆಯಲ್ಲಿ ಅ. 2 ರಂದು ಬೆಳಗ್ಗೆ 11 ಗಂಟೆಗೆ ವಿಷ್ಣು ರಿಜೆನ್ಸಿ ಹಾಲ್ ಬಿಕ್ಕೋಡು ರಸ್ತೆ ಇಲ್ಲಿ ನಡೆಸಲಾಗಿದ್ದು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ವರ್ಗಗಳ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ದಲಿತ ಸಂಘರ್ಷ ಸಮಿತಿ ಇತರೆ ಸಂಘ ಸಂಸ್ಥೆಗಳ ಮುಖಂಡರು ಸದಸ್ಯರು ಸದರಿ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ನಿವಾರಿಸಿಕೊಳ್ಳವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ತಾಲ್ಲೂಕು ಮಟ್ಟದ ಪರಿಶಿಷ್ಠ ಜಾತಿ/ ಪರಿಶಿಷ್ಠ ವರ್ಗದ ಹಿತರಕ್ಷಣಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ. (ಎನ್.ಬಿ)

Leave a Reply

comments

Related Articles

error: