ಮೈಸೂರು

‘ಫೋರಂ ಆಫ್ ಸಿವಿಲ್ ಇಂಜಿನಿಯರಿಂಗ್ ‘ನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನೆ

ಮೈಸೂರು,ಸೆ.29:- ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಮೈಸೂರಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ತನ್ನ ಪಠ್ಯ ಪೂರಕ ಚಟುವಟಿಕೆಗಳ ಅಂಗವಾದ ‘ಫೋರಂ ಆಫ್ ಸಿವಿಲ್ ಇಂಜಿನಿಯರಿಂಗ್ ‘ (ಫೋರ್ಸ್)ನ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಕಾಲೇಜಿನ ಸರ್ ಎಂ. ವಿ. ಹಾಲ್ ನಲ್ಲಿ ಹಮ್ಮಿಕೊಂಡಿತ್ತು.

ಇತ್ತೀಚೆಗೆ ನಡೆದ ಕಾರ್ಯಕ್ರಮವನ್ನು  ಮೈಸೂರಿನ ಹಿರಿಯ ಸಿವಿಲ್ ಇಂಜಿನಿಯರ್ ಹಾಗೂ ಖ್ಯಾತ ಸಂಗೀತ ವಿಮರ್ಶಕರಾದ ಎಂ ಎಲ್. ಕೃಷ್ಣಸ್ವಾಮಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಬಗೆಗಿನ ಅನೇಕ ವಿಷಯಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ತಮ್ಮ ಕಾರ್ಯಕ್ಷೇತ್ರದಲ್ಲಿನ ಐದು ದಶಕಗಳಿಗೂ ಅಧಿಕ ಸೇವೆಯಿಂದ ಪಡೆದ ಅನುಭವವನ್ನು ಹಂಚಿಕೊಂಡರಲ್ಲದೆ, ನೂತನ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭ  ಸಂಸ್ಥೆಯ ಪ್ರಾಂಶುಪಾಲರಾದ ಡಾ. ಬಿ. ಜಿ. ನರೇಶ್ ಕುಮಾರ್, ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ಸಿ. ರಾಮಕೃಷ್ಣೇಗೌಡ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಸಿವಿಲ್ ಸಹಪ್ರಾಧ್ಯಾಪಕರಾದ ಅನಿರುದ್ಧ  ಎ. ಎಂ. ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಸಿವಿಲ್ ಎಂಜಿನಿಯರಿಂಗ್ ಮಾಡಲ್, ಛಾಯಾಚಿತ್ರ, ಪೋಸ್ಟರ್ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಅತಿಥಿಗಳು ವೀಕ್ಷಿಸಿದರು. (ಜಿ.ಕೆ,ಎಸ್,ಎಚ್)

Leave a Reply

comments

Related Articles

error: