ಮೈಸೂರು

ಅಂಶಿ ಪ್ರಸನ್ನಕುಮಾರ್ ಅವರಿಗೆ ’ಜೀವಮಾನ ಸಾಧನಾ ಪ್ರಶಸ್ತಿ’

ಮೈಸೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿರುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಸಲುವಾಗಿ ಬೆಂಗಳೂರು ಪ್ರೆಸ್‌ಕ್ಲಬ್ ಆಶ್ರಯದಲ್ಲಿ ಕೊಡಮಾಡುವ ‘ಜೀವಮಾನ ಸಾಧನಾ ಪ್ರಶಸ್ತಿ’ಗೆ ಮೈಸೂರಿನ ಹಿರಿಯ ಪತ್ರಕರ್ತ ಹಾಗೂ ‘ಕನ್ನಡಪ್ರಭ’ ಪತ್ರಿಕೆಯ ಸಹಾಯಕ ಸಂಪಾದಕರಾದ ಅಂಶಿ ಪ್ರಸನ್ನ ಕುಮಾರ್ ಅವರು ಭಾಜನರಾಗಿದ್ದಾರೆ.

2016ನೇ ಸಾಲಿನ ಪ್ರಶಸ್ತಿಗೆ ಅಂಶಿ ಪ್ರಸನ್ನಕುಮಾರ್ ಅವರ ಆಯ್ಕೆ ನಡೆದಿದ್ದು, ಕಳೆದ ಕೆಲ ದಶಕಗಳ ಕಾಲ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಲಾಗಿರುವ ಅನುಪಮ ಸೇವೆಯನ್ನು ಗುರುತಿಸಿಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಪ್ರಕಟಣೆ ತಿಳಿಸಿದೆ.

ಡಿ.31ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಶಿ ಪ್ರಸನ್ನಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಗೃಹಸಚಿವ ಡಾ. ಜಿ. ಪರಮೇಶ್ವರ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಪ್ರಶಸ್ತಿಗೆ ಭಾಜನರಾಗಿರುವ ಅಂಶಿ ಪ್ರಸನ್ನಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ.

Leave a Reply

comments

Related Articles

error: