ಕರ್ನಾಟಕಪ್ರಮುಖ ಸುದ್ದಿ

ರಾಮನಗರ, ಜಮಖಂಡಿ ಉಪ ಚುನಾವಣೆ: ಸಿದ್ಧತೆಗೆ ಆಯೋಗ ಸೂಚನೆ

ಬೆಂಗಳೂರು (ಸೆ.29): ಬಾಗಲಕೋಟೆಯ ಜಮಖಂಡಿ ವಿಧಾನಸಭಾ ಕ್ಷೇತ್ರ ಹಾಗೂ ರಾಮನಗರಕ್ಕೆ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ.

ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ನಡೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು, ಬಳಿಕ ರಾಮನಗರ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜಿನಾಮೆ ನೀಡಿದ್ದರು.

ಇನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಿದ್ದು ನ್ಯಾಮಗೌಡ ಅವರು, ಮೇ 28ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜಮಖಂಡಿ ಕ್ಷೇತ್ರ ತೆರವಾಗಿತ್ತು. ಇದೀಗ ಈ ಎರಡೂ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಶೀಘ್ರದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಒಂದು ಕ್ಷೇತ್ರ ತೆರವಾದರೆ ಆರು ತಿಂಗಳ ಒಳಗಾಗಿ ಚುನಾವಣೆಯನ್ನು ನಡೆಸಬೇಕು, ಹೀಗಾಗಿ ಉಪ ಚುನಾವಣೆಗೆ ನಡೆಸಲು ಸಿದ್ಧತೆ ಮಾಡಬೇಕಿದೆ. ಕೇಂದ್ರ ಚುನಾವಣಾ ಆಯೋಗವು ಈ ಎರಡು ಕ್ಷೇತ್ರಗಳಿಗೆ ಶೀಘ್ರವೇ ಚುನಾವಣಾ ದಿನಾಂಕ ಘೋಷಣೆ ಮಾಡಲಿದೆ. (ಎನ್.ಬಿ)

Leave a Reply

comments

Related Articles

error: