ಮೈಸೂರು

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಬಿಬಿಎಂಪಿ ಮೇಯರ್ ಗಂಗಾಂಬಿಕಾ : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಒತ್ತು

ಮೈಸೂರು,ಸೆ.30:-   ಬಿಬಿಎಂಪಿ ಮೇಯರ್ ಗಂಗಾಂಬಿಕಾ  ಇಂದು ಸುತ್ತೂರು ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಅವರು ಮೇಯರ್ ಆದ ಬಳಿಕ ಮೊದಲ ಬಾರಿ ಶ್ರೀಗಳ ಆಶಿರ್ವಾದ ಪಡೆದಿದ್ದೇನೆ. ಸ್ವಚ್ಛ ಬೆಂಗಳೂರಿಗೆ ನಾನು ಮೊದಲ ಆದ್ಯತೆ ನೀಡುತ್ತೇನೆ. ಮಳೆಗಾಲದಲ್ಲಿ ಬೆಂಗಳೂರಿನಲ್ಲಾಗುವ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಲ್ಲಿ ಹೂಳು ತುಂಬಿಕೊಳ್ಳುವುದರಿಂದ ಸಮಸ್ಯೆಯಾಗುತ್ತಿದೆ. ಮುಂದಿನ ದಿಗಳಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಗಮನ ಹರಿಸಲಾಗುತ್ತದೆ. ಬೆಂಗಳೂರಿಗರಿಗೆ ಮೂಲಭೂತ ಸೌಕರ್ಯಗಳನ್ನು ಕೊಟ್ಟರೆ ಸಾಕು. ಅವರು ಹೆಚ್ಚೇನು ನಮ್ಮಕಡೆಯಿಂದ ಅಪೇಕ್ಷೆ ಪಡೋದಿಲ್ಲ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಾನು ಒತ್ತು ನೀಡುತ್ತೇನೆ. ಒಂದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದರು. ಮೈಸೂರು ಮೇಯರ್ ಆಯ್ಕೆ ವಿಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಷದ ವರಿಷ್ಠರು ಆ ಬಗ್ಗೆ ತೀರ್ಮಾನಗಳನ್ನು  ಮಾಡುತ್ತಾರೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: