ಪ್ರಮುಖ ಸುದ್ದಿಮೈಸೂರು

ನಾನೇ ಟ್ರಬಲ್ ಶೂಟರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಸೆ.30:-  ಅಕ್ಟೋಬರ್ 3ರ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಸರ್ಕಾರ ಅಸ್ಥಿರಗಳಿಸುವ ಪ್ರಯತ್ನ ಮಾಧ್ಯಮಗಳ ಸೃಷ್ಟಿ. ಯಾವೊಬ್ಬ ಶಾಸಕರು ಸರ್ಕಾರ ಅಸ್ತಿರಗೊಳಿಸಲು ಕೈ ಹಾಕಿಲ್ಲ. ರಾಜ್ಯಾದ್ಯಂತ ಸಮಿಶ್ರ  ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಸಾಲ ಮನ್ನಾ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿ ನಡೆಯಲಿದೆ. ಅಗತ್ಯ ಬಿದ್ರೆ ಮಾತ್ರ ಸಮನ್ವಯ ಸಮಿತಿ ಸಭೆ ನಡೆಯಲಿದೆ.  ಟ್ರಬಲ್ ಶೂಟರ್ ನಾನೇ. ಸಮಿಶ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ನನ್ನ  ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರೋದು ಎಂದರು. ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ವಿಚಾರ ಕೋರ್ಟ್ ನಲ್ಲಿದೆ. ನ್ಯಾಯಾಲಯದ ಆದೇಶದ ಬಳಿಕ ಮೇಯರ್, ಉಪಮೇಯರ್ ಆಯ್ಕೆ ನಡೆಯಲಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: