
ಮೈಸೂರು
ಕವಾಯತು ಮೈದಾನದಲ್ಲಿ ಪೊಲೀಸ್ ಪೇದೆಗಳ ನೇಮಕಾತಿ ದೈಹಿಕ ಪರೀಕ್ಷೆ
ಮೈಸೂರಿನ ಕವಾಯತು ಮೈದಾನದಲ್ಲಿ ಪೊಲೀಸ್ ಪೇದೆಗಳ ನೇಮಕಾತಿಯ ದೈಹಿಕ ಪರೀಕ್ಷೆ ನಡೆಯಿತು.
ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಖಾಲಿಯಿದ್ದ 195 ಪೊಲೀಸ್ ಪೇದೆಗಳ ನೇಮಕಾತಿಗಾಗಿ ದೈಹಿಕ ಪರೀಕ್ಷೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನೇಮಕಾತಿ ಸಮಿತಿಯ ಮುಖ್ಯಸ್ಥರಾದ ರವಿ ಡಿ. ಚನ್ನಣ್ಣನವರ್ ಅವರ ಸಮ್ಮುಖದಲ್ಲಿ ನಡೆಯಿತು.
ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 500ಕ್ಕೂ ಹೆಚ್ಚು ಮಂದಿ 600 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತದಲ್ಲಿ ಪಾಲ್ಗೊಂಡು ದೈಹಿಕ ಪರೀಕ್ಷೆಯನ್ನು ಎದುರಿಸಿದರು.
ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ, ಕೆ.ಆರ್.ಠಾಣೆಯ ಎಸಿಪಿ ಸಿ.ಮಲ್ಲಿಕ್ ಮುಂತಾದವರು ಹಾಜರಿದ್ದರು.