ಮೈಸೂರು

ಸಂಭ್ರಮದಿಂದ ನಡೆದ ಸದ್ವಿದ್ಯಾ ವಾರ್ಷಿಕೋತ್ಸವ

ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ  ಸದ್ವಿದ್ಯಾಶಾಲೆಯ ವತಿಯಿಂದ ಪಾಲಕರ ದಿನಾಚರಣೆ ಮತ್ತು ಶಾಲಾ ವಾರ್ಷಿಕೋತ್ಸವವನ್ನು ಏರ್ಪಡಿಸಲಾಗಿತ್ತು.

ಪಾಲಕರ ದಿನಾಚರಣೆ ಮತ್ತು ಶಾಲಾ ವಾರ್ಷಿಕೋತ್ಸವದಲ್ಲಿ  ಶಾಲೆಯ ಅಧ್ಯಕ್ಷ ವಿಜಯಶೇಖರ್ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ನಮೂಹ ಗಾಯನ, ಸಮೂಹ ನೃತ್ಯ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಈ ಸಂದರ್ಭ ನೂರಾರು ಸಂಖ್ಯೆಯಲ್ಲಿ ಪಾಲಕರು ಪಾಲ್ಗೊಂಡು ತಮ್ಮ ಮಕ್ಕಳ ಪ್ರತಿಭೆಯನ್ನು ಕಣ್ಣಾರೆ ವೀಕ್ಷಿಸಿ ಸಂಭ್ರಮಿಸಿದರು. ವಾರ್ಷಿಕೋತ್ಸವವು ಸಡಗರ ಸಂಭ್ರಮದಿಂದ ಜರುಗಿತು.

Leave a Reply

comments

Related Articles

error: