
ಮೈಸೂರು
ರಾಮೇಶ್ವರಿ ವರ್ಮಾ ಅವರಿಗೆ ಸನ್ಮಾನ
ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಸಂಸ್ಥೆಯಲ್ಲಿ ಹಿರಿಯ ರಂಗಕರ್ಮಿ ರಾಮೇಶ್ವರಿ ವರ್ಮಾ ಅವರನ್ನು ಸನ್ಮಾನಿಸಲಾಯಿತು.
ವಿಶ್ವವಿದ್ಯಾನಿಲಯದ ಅಧ್ಯಯನ ಸಂಸ್ಥೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ರಾಮೇಶ್ವರಿ ವರ್ಮಾ ಅವರನ್ನು ಹಸಿರು ಪೇಟ ತೊಡಿಸಿ, ಶಾಲು ಹೊದೆಸಿ, ಫಲಪುಷ್ಪ ನೀಡಿ, ಸನ್ಮಾನಿಸಲಾಯಿತು.
ಈ ಸಂದರ್ಭ ಪ್ರೊ.ವಿ.ಕೆ.ನಟರಾಜ್, ಪ್ರೊ.ಎನ್.ನಾರಾಯಣ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.