
ಮೈಸೂರು
ಕಾರ್ ಪಲ್ಟಿ: ದಂತ ವೈದ್ಯ ಸ್ಥಳದಲ್ಲೇ ಸಾವು
ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಬಳಿ ಕಾರು ಪಲ್ಟಿಯಾಗಿ ದಂತ ವೈದ್ಯರೊಬ್ಬರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮಳವಳ್ಳಿಯ ನೆಲಕಾಮನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನೊಳಗಿದ್ದ ಡಾ. ಸದಾಶಿವ(42) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾ.ಸದಾಶಿವ ಅವರು ಮಳವಳ್ಳಿ ಪಟ್ಟಣದ ಕೋಟೆ ಬೀದಿಯಲ್ಲಿ ಹರ್ಷಿತಾ ಕ್ಲಿನಿಕ್ ಅನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.