ಮೈಸೂರು

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಮೈಸೂರು,ಅ.2-ಗಾಂಧಿ ಜಯಂತಿ ಪ್ರಯುಕ್ತ ರೋಟರಿ ಸಂಸ್ಥೆ ಸಹಯೋಗದಲ್ಲಿ ಎಂ.ಐ.ಟಿ ಕಾಲೇಜಿನ ವಿದ್ಯಾರ್ಥಿಗಳು ನಗರದ ವಿವಿಧೆಡೆ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದರು.

ನಗರದ ಸ್ವಾತಂತ್ರ್ಯ ಹೋರಾಟಗಾರರ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆ ಶುಚಿಗೊಳಿಸಿ ಪಾರ್ಕ್ ನಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ಶಾಂತಿದೂತನ ಮಾದರಿಯಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕು. ಗಾಂಧೀಜಿ ಅವರು ಕರೆ ನೀಡಿರುವಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂದಿನ ಯುವ ಸಮೂಹ ಗಾಂಧಿ ತತ್ವ ಅಳವಡಿಸಿಕೊಳ್ಳುವ ಮೂಲಕ ಅಹಿಂಸ ಮಾರ್ಗದಲ್ಲಿ ನಡೆಯಬೇಕು ಎಂದರು.

ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು. (ಕೆ.ಎಸ್, ಎಂ.ಎನ್)

 

Leave a Reply

comments

Related Articles

error: