ಮೈಸೂರು

ನೀಟ್ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿ: ಉಗ್ರ ಹೋರಾಟದ ಎಚ್ಚರಿಕೆ

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ಯಲ್ಲಿ ಕೇಂದ್ರ ಸರ್ಕಾರ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ವಿರೋಧಿಸಿ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆ ಎದುರು ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಮಾತನಾಡಿ, ಕೇಂದ್ರ ಸರ್ಕಾರ ಕನ್ನಡ ಭಾಷೆಯಲ್ಲಿ  ನೀಟ್ ಪರೀಕ್ಷೆ ಬರೆಯಲು ಅವಕಾಶ ನೀಡದೆ ಕನ್ನಡದವರಿಗೆ ಅನ್ಯಾಯವೆಸಗುತ್ತಿದೆ. ಕನ್ನಡಿಗರಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೀಟ್ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಸಂಸದರ ವಿರುದ್ಧ ಘೋಷಣೆ ಕೇಳಿಬಂತು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಪತ್ರಿಕೋದ್ಯಮಿ ರಾಜಶೇಖರ್ ಕೋಟಿ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: