ಮೈಸೂರು

ಗಾಂಧಿ ಜಯಂತಿ ಪ್ರಯುಕ್ತ ಚಿತ್ರಕಲಾ ಪ್ರದರ್ಶನ

ಮೈಸೂರು,ಅ.2-ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಸಂದರ್ಭದ ಚಿತ್ರಕಲಾ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

150ನೇ ಗಾಂಧಿ‌ ಜಯಂತಿ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲಾವಿದ ಯು.ಜಿ.ಮೋಹನ್ ಅವರಿಂದ ಕಲಾಮಂದಿರದ ಸುಚಿತ್ರಾ ಕಲಾ ಗ್ಯಾಲರಿಯಲ್ಲಿ ಆಯೋಜಿಸಿದ್ದ ಚಿತ್ರಕಲಾ ಪ್ರದರ್ಶನದಲ್ಲಿರುವ ಸ್ವಾತಂತ್ರ್ಯ ಹೋರಾಟಗಳ ಚಿತ್ರಕಲೆ ಯು.ಜಿ.ಮೋಹನ್ ಅವರ ಕುಂಚದಲ್ಲಿ ಅದ್ಭುತವಾಗಿ ಅರಳಿದೆ.

ಚಿತ್ರಕಲಾ ಪ್ರದರ್ಶನ ನೋಡಲು ಬಂದಿದ್ದ ಗಾಂಧಿ ಅಭಿಮಾನಿಗಳಿಗೆ ಯು.ಜಿ.ಮೋಹನ್ ಚಿತ್ರಗಳ ಬಗ್ಗೆ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಕಸಪಾ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಇತರರು ಹಾಜರಿದ್ದರು. (ಕೆ.ಎಸ್, ಎಂ.ಎನ್)

Leave a Reply

comments

Related Articles

error: