
ಪ್ರಮುಖ ಸುದ್ದಿ
ಕಣ್ಣು ನೋವಿನಿಂದ ಬಳಲುತ್ತಿದ್ದಾರಂತೆ ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯ(ಬೆಂಗಳೂರು)ಅ.3:- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ನೋವಿನಿಂದ ಬಳಲುತ್ತಿದ್ದು, ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರಂತೆ.
ವೈದ್ಯರ ಸೂಚನೆಯಂತೆ ತಮ್ಮ ನಿವಾಸದಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ರಾಂತಿ ಪಡೆಯುತ್ತಿದ್ದು, ಧೂಳಿನ ಅಲರ್ಜಿಯಿಂದ ಈ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ವಿಶ್ರಾಂತಿಯ ಹಿನ್ನೆಲೆಯಲ್ಲಿ ಯಾರ ಭೇಟಿಗೂ ಅವಕಾಶ ನೀಡಿಲ್ಲವಂತೆ. ಏತನ್ಮಧ್ಯೆ ಭದ್ರಾವತಿ ಶಾಸಕ ಸಂಗಮೇಶ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಸಿದ್ದರಾಮಯ್ಯನವರ ಮನೆಯ ಮುಂದೆ ಪ್ರತಿಭಟನೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)