ಪ್ರಮುಖ ಸುದ್ದಿ

ಸಾಧಕರ ಸಾಧನೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ : ಆರ್.ಮಂಜುನಾಥ್

ರಾಜ್ಯ(ಚಾಮರಾಜನಗರ) ಅ.3- ಸ್ವತಂತ್ರ ಭಾರತದ ಹೋರಾಟದಲ್ಲಿ ಮಹಾತ್ಮಗಾಂಧಿಯವರ ಪಾತ್ರ ಹಿರಿದು, ಇಂದಿನ ವಿದ್ಯಾರ್ಥಿಗಳು ಅವರ ತತ್ವ ಆದರ್ಶ ಗುಣಗಳ ಅಧ್ಯಯನ ಮಾಡುವುದರ ಜೊತೆಗೆ ಕ್ರೀಡೆ, ವೈದ್ಯಕೀಯ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಯನ್ನು ಮಾಡಿರುವ ಸಾಧಕರ ಬಗ್ಗೆ ಹೆಚ್ಚೆಚ್ಚು ಅಧ್ಯಯನ ಮಾಡಬೇಕೆಂದು ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಾಯಕ ಆರ್.ಮಂಜುನಾಥ್ ಸಲಹೆ ನೀಡಿದರು.

ರಾಮಾಪುರ ಜೆಎಸ್‍ಎಸ್ ವಿದ್ಯಾಸಂಸ್ಥೆ ಆವರಣದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಾತ್ಮಗಾಂಧಿ ದಕ್ಷಿಣ ಆಫ್ರಿಕಾದಲ್ಲಿದ್ದ ವರ್ಣಭೇದ ನೀತಿಯನ್ನು ವಿರೋಧಿಸಿ ಹೋರಾಟ ನಡೆಸಿದರು. ಅಹಿಂಸಾತ್ಮಕ ಹೋರಾಟದ ಮೂಲಕ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗುವಂತೆ ಮಾಡಿದರು. ಸಾಧಕರ ಸಾಧನೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿರುತ್ತದೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಕರುಗಳು ಸ್ಫೂರ್ತಿದಾಯಕವಾದ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ನಿಟ್ಟಿನಲ್ಲಿ ಒತ್ತನ್ನು ನೀಡಬೇಕೆಂದು ತಿಳಿಸಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರ್.ಮಂಜುನಾಥ್‍ ಅವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲ ಮಲ್ಲೇಶ್, ಮುಖ್ಯ ಶಿಕ್ಷಕ ನಟರಾಜು, ಶಿಕ್ಷಕ ಹಾಗೂ ಉಪನ್ಯಾಸಕ ವೃಂದ ಮುಖಂಡರಾದ ಮಾದೇಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: