
ಪ್ರಮುಖ ಸುದ್ದಿ
ಸ್ವಚ್ಛ ಗ್ರಾಮ, ಸ್ವಚ್ಛ ಪರಿಸರ : ಮಕ್ಕಂದೂರಿನಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
ರಾಜ್ಯ(ಮಡಿಕೇರಿ) ಅ.4 : – ಸ್ವಚ್ಛ ಭಾರತದ ಕನಸು ಕಂಡಿದ್ದ ಮಹಾತ್ಮ ಗಾಂಧಿ ಅವರ ಅಭಿಲಾಷೆಯನ್ನು ಪೂರ್ಣಗೊಳಿಸುವ ಉದ್ದೇಶದಿಂದ ಗಾಂಧಿ ಜಯಂತಿಯಂದೇ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ಹಿರಿಯರಿಗೆ ಮಾದರಿಯಾದರು.
ಮಕ್ಕಂದೂರು ಗ್ರಾಮದಲ್ಲಿ ಕೂಡ ಮಕ್ಕಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಗ್ರಾಮಸ್ಥರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರು. ಕಸ ಕಡ್ಡಿ, ಗಿಡ, ಗಂಟಿಗಳು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛ ಗ್ರಾಮ, ಸ್ವಚ್ಛ ಪರಿಸರವೆಂದು ಬೀಗಿದರು.
ಮಕ್ಕಂದೂರು ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನವನ್ನು ಅಸೋಸಿಯೇಷನ್ ಅಧ್ಯಕ್ಷ ವಿಕಾಸ್ ಅಚ್ಚಯ್ಯ ಉದ್ಘಾಟಿಸಿದರು.
ಉಪಾಧ್ಯಕ್ಷ ಮನು ಮುದ್ದಪ್ಪ, ಪ್ರಮುಖರಾದ ಮನು ಉತ್ತಪ್ಪ, ಅಯ್ಯಪ್ಪ, ಡ್ಯಾನಿಯಲ್, ರಾಜ, ನಯನಾ ಚಂಗಪ್ಪ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಅಸೋಸಿಯೇಷನ್ ವತಿಯಿಂದ ಅಗತ್ಯ ಪರಿಕರಗಳನ್ನು ವಿತರಿಸಲಾಯಿತು. (ಕೆಸಿಐ,ಎಸ್.ಎಚ್)