ಮೈಸೂರು

ಮಾವುತರಿಗೆ ಉಚಿತ ಕಣ್ಣಿನ ತಪಾಸಣೆ

ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ಮತ್ತು ನೇತ್ರಧಾಮ ಕಣ್ಣಿನ ಆಸ್ಪತ್ರೆ ವತಿಯಿಂದ ಅರಮನೆ ಆವರಣದಲ್ಲಿ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಆನೆಯ ಮಾವುತರಿಗೆ ಗುರುವಾರ ಉಚಿತ ಕಣ್ಣಿನ ಚಿಕಿತ್ಸೆಯನ್ನು ಏರ್ಪಡಿಸಲಾಗಿತ್ತು. ಆಂದೋಲನ ದಿನಪತ್ರಿಕೆಯ ಸಂಪಾದಕ ರಾಜಶೇಖರ ಕೋಟಿ ಆಹಾರ ವಿಭಾಗದ ಉಪನಿರ್ದೇಶಕ ಡಾ.ಕೆ. ರಾಮೇಶ್ವರಪ್ಪ, ನೇತ್ರಧಾಮ ಆಸ್ಪತ್ರೆಯ ನೇತ್ರತಜ್ಞ ಡಾ.ನವೀನ್, ಕಸಪಾ ಜಿಲ್ಲಾಧ್ಯಕ್ಷ ಡಾ. ವೈ.ಡಿ. ರಾಜಣ್ಣ, ಮೈಸೂರು ಕಸಾಪ ಅಧ್ಯಕ್ಷ ರಾದ ಕೆ.ಎಸ್. ಶಿವರಾಮು, ಮಾಜಿ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ ಮತ್ತು ಎಂ. ಚಂದ್ರಶೇಖರ, ವಿಶ್ವಕರ್ಮ ಮಹಾಮಂಡಲದ ಜಿಲ್ಲಾಧ್ಯಕ್ಷ ಸಿ.ಟಿ. ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: