ಸುದ್ದಿ ಸಂಕ್ಷಿಪ್ತ

ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ : ಮಳಿಗೆ ಬಾಡಿಗೆ ಪಡೆಯಲು ಅರ್ಜಿ ಆಹ್ವಾನ

ಮಂಡ್ಯ (ಅ.4): 2018-19ನೇ ಸಾಲಿನ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘ, ಮಂಡ್ಯ ಇವರ ಸಂಯುಕ್ತಶ್ರಯದಲ್ಲಿ ನವೆಂಬರ್ 1 ರಿಂದ 5 ರವರೆಗೆ 5 ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ ವಿವಿಧ ಮಳಿಗೆಗಳನ್ನು ಬಾಡಿಗೆಗೆ ಪಡೆಯಲು ಇಚ್ಚಿಸುವವರು ಅಕ್ಟೋಬರ್ 22 ರೊಳಗೆ ಅರ್ಜಿ ಸಲ್ಲಿಸಬೇಕು.

ಪ್ರಥಮ ಆಧ್ಯತೆ ತೋಟಗಾರಿಕೆ ಹಾಗೂ ಕೃಷಿಗೆ ಸಂಬಂಧಿಸಿದ ಮಳಿಗೆಗಳಿಗೆ ನೀಡಲಾಗುವುದು. ಪ್ರತಿ ಮಳಿಗೆಗೆ ರೂ.4000 ಗಳನ್ನು ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಂಡ್ಯ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: