ಮೈಸೂರು

ರಾಷ್ಟ್ರಕವಿ ಕುವೆಂಪು ಮತ್ತು ನಾಡಪ್ರಭು ಕೆಂಪೇಗೌಡ ಸ್ಮರಣೋತ್ಸವ ಡಿ.30ರಂದು

ರಾಷ್ಟ್ರಕವಿ ಕುವೆಂಪು ಮತ್ತು ನಾಡಪ್ರಭು ಕೆಂಪೇಗೌಡರ ಸ್ಮರಣೋತ್ಸವವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಡಿ.30ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಬಿ.ಟಿ. ಬಸವರಾಜ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅವರು ಮಂಗಳವಾರ ಪತ್ರಕರ್ತರ ಭವನದಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 1 ಗಂಟೆಗೆ ಜೆ.ಕೆ.ಮೈದಾನದ ಅಮೃತ ಮಹೋತ್ಸವ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಹೆಚ್.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದಗೌಡ ಉಪಸ್ಥಿತರಿರುವರು. ಶಾಸಕ ಪಿ.ವಾಸು ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಶಾಸಕ ಜಿ.ಟಿ. ದೇವೇಗೌಡ, ಮೇಯರ್ ರವಿಕುಮಾರ್, ಸಚಿವರಾದ ಎಂ.ಕೃಷ್ಣಪ್ಪ, ಡಿ.ಕೆ.ಶಿವಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ, ಸಿ.ಎಸ್.ಪುಟ್ಟರಾಜು, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹಾಗೂ ಇತರರು ಭಾಗವಹಿಸುವರು.

ಆದಿಚುಂಚನಗಿರಿ ಮಠ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸ್ಫಟಿಕಾಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಆದಿಚುಂಚನಗಿರಿ ಶಾಖಾಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಹಾಗೂ ಶ್ರೀ ಶಿವಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ತಿಳಿಸಿದರು.

ಅಂದು ಬೆಳಗ್ಗೆ 10ಕ್ಕೆ ಕೋಟೆ ಆಂಜನೇಯ ದೇವಸ್ಥಾನದಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಹಲವಾರು ಜಾನಪದ ಕಲಾತಂಡಗಳು ಭಾಗವಹಿಸಲಿದ್ದು ನಗರದ ಮುಖ್ಯಮಾರ್ಗಗಳಲ್ಲಿ ಸಂಚರಿಸಿ ಮಧ್ಯಾಹ್ನ 1ರ ವೇಳೆಗೆ ಜೆ.ಕೆ.ಮೈದಾನ ತಲುಪಲಿದೆ ಎಂದರು.

ರಥಯಾತ್ರೆ: 5 ದಿನಗಳ ಕಾಲ ರಾಷ್ಟ್ರಕವಿ ಕುವೆಂಪು ಹಾಗೂ ಕೆಂಪೇಗೌಡರ ಪುತ್ಥಳಿಯ ಬೆಳ್ಳಿ ರಥದ ಮೆರವಣಿಗೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಕಾಶ್ ಹಾಗೂ ಶಂಕರೇ ಗೌಡ ಉಪಸ್ಥಿತರಿದ್ದರು.

Leave a Reply

comments

Related Articles

error: