
ಪ್ರಮುಖ ಸುದ್ದಿ
ಖಾಸಗಿ ಕಂಪನಿಯ ಉದ್ಯೋಗಿ ಆತ್ಮಹತ್ಯೆಗೆ ಶರಣು
ರಾಜ್ಯ(ಬೆಂಗಳೂರು)ಅ.4:- ಜೀವನದಲ್ಲಿ ಜಿಗುಪ್ಸೆ ಹೊಂದಿದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮನೆಯ ಟೆರೇಸ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ನ ಔನಾಗಗೊಂಡನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ನಾಗಗೊಂಡನಹಳ್ಳಿ ನಿವಾಸಿ ವಿನಯ್ ಕುಮಾರ್ (26) ಎಂದ ಗುರುತಿಸಲಾಗಿದೆ. ಚಿತ್ರದುರ್ಗ ಮೂಲದ ಕುಮಾರ್ ಬಾಡಿಗೆಗಿದ್ದ ಮನೆಯ ಟೆರೇಸ್ಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಟೆರೇಸ್ ಮೇಲೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿನಯ್ ಕುಮಾರ್ ಅವರ ಬಾಯಿಯಲ್ಲಿ ನೊರೆ ಬಂದಿದ್ದು ಅಲ್ಲೆ ಇದ್ದ ಬ್ಯಾಗ್ನಲ್ಲಿ ದೊರೆತಿರುವ ಡೆತ್ನೋಟ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ.ಬ್ಯಾಗ್ನಲ್ಲಿ ಬಿಳಿ ಬಣ್ಣದ ಪೌಡರ್ ಕೂಡ ಸಿಕ್ಕಿದ್ದು, ಅದು ಸಯನೈಡ್ ಎಂದು ತಿಳಿದುಬಂದಿದೆ. ಅದನ್ನು ಮದ್ಯದಲ್ಲಿ ಬೆರೆಸಿ ಕುಡಿದು ಆತ್ಮಹತ್ಯೆಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)