ಸುದ್ದಿ ಸಂಕ್ಷಿಪ್ತ

ದಸರಾ ಮಹೋತ್ಸವ: ನಳಪಾಕ, ಸವಿಭೋಜನ ಸ್ಪರ್ಧೆ

ಮೈಸೂರು,ಅ.4-ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಅ.10 ರಿಂದ 18 ರವರೆಗೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೆಸ್ ಹೋಟಲ್ ಪಕ್ಕದ ಮುಡಾ ಮೈದಾನದಲ್ಲಿ ಆಹಾರ ಮೇಳವನ್ನು ಆಯೋಜಿಸಲಾಗಿದೆ.

ಈ ಎರಡು ಸ್ಥಳಗಳಲ್ಲಿ ಪ್ರತಿದಿನ ಬೆಳಿಗ್ಗೆ 11.30 ರಿಂದ 1 ಗಂಟೆಯವರೆಗೆ ನಳಪಾಕ ಸ್ಪರ್ಧೆ ಮತ್ತು ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಸವಿಭೋಜನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ನಗದು ಬಹುಮಾನ, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.

ನಳಪಾಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 1000 ರೂ. ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ, ದ್ವಿತೀಯ ಬಹುಮಾನವಾಗಿ 750 ರೂ. ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ, ತೃತೀಯ ಬಹುಮಾನವಾಗಿ 500 ರೂ. ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಅದೇ ರೀತಿ ಸವಿಭೋಜನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನದ ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2422107 ಅನ್ನು ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: