ಮೈಸೂರು

ದಸರಾ ಕನ್ನಡ ಪುಸ್ತಕ ಮೇಳ: ಮಳಿಗೆಗೆ ಅರ್ಜಿ ಆಹ್ವಾನ

ಮೈಸೂರು,ಅ.4-ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಅ.10 ರಿಂದ 19 ವರೆಗೆ ಮೈಸೂರಿನಲ್ಲಿ ದಸರಾ ಕನ್ನಡ ಪುಸ್ತಕ ಮೇಳ ಕಾಡಾ ಮೈದಾನದಲ್ಲಿ ನಡೆಯಲಿದೆ.

ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆ /ಪ್ರದರ್ಶಕರು ಭಾಗವಹಿಸಬಹುದಾಗಿದ್ದು, 50 ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು. ನಿಗದಿತ ಅರ್ಜಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅಥವಾ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಥವಾ  ವೆಬ್‍ಸೈಟ್ www.kannadapustakapradhikara.com ಪಡೆದು ಮಳಿಗೆಯೊಂದಕ್ಕೆ 2,000 ರೂ. ಬಾಡಿಗೆ ಹಾಗೂ 1,000 ರೂ. ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಪಡೆದು ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅ.6 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ಸಲ್ಲಿಸುವುದು.  ಹೆಚ್ಚಿನ ಮಾಹಿತಿಗೆ ದೂ.ಸಂ. 080-22484516 / 22107704 ಅನ್ನು ಸಂಪರ್ಕಿಸುವುದು. (ಎಂ.ಎನ್)

 

Leave a Reply

comments

Related Articles

error: