
ರಾಜ್ಯ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಒಲಂಪಿಕ್ ಸಂಸ್ಥೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಘೋಷಿಸಿದ್ದಾರೆ.
ಒಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ಐದು ಕೋಟಿ ರೂ.ಗಳ ನಗದು ಬಹುಮಾನ ನೀಡಲಾಗುವುದು, ಅಲ್ಲದೇ ಬೆಳ್ಳಿ ಹಾಗೂ ಕಂಚು ಪದಕ ವಿಜೇತರಿಗೆ ಬಹುಮಾನವನ್ನು ನೀಡಲಾಗುವುದು ಎಂದಿದ್ದಾರೆ.
ಬೆಳ್ಳಿ ಮತ್ತು ಕಂಚು ಪದಕ ವಿಜೇತರಿಗೆ ಅನುಕ್ರಮವಾಗಿ 3 ಮತ್ತು 2 ಕೋಟಿ ರೂಪಾಯಿಗಳ ನಗದು ಬಹುಮಾನವನ್ನು ಘೋಷಿಸಿದ್ದಾರೆ.