ಕರ್ನಾಟಕಪ್ರಮುಖ ಸುದ್ದಿ

ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಎಸಿಬಿಯೇ ಗುರಾಣಿ: ರಾಜ್ಯ ಸರ್ಕಾರದ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಇತ್ತೀಚೆಗೆ ಕೇಂದ್ರ ಆದಾಯ ತೆರಿಗೆ ದಾಳಿಯಲ್ಲಿ ಸಿಕ್ಕಿ ಬಿದ್ದಿರುವ ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಈ ಕುರಿತು ಇಂದು (ಡಿ.27) ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸಲು ಎಸಿಬಿಯನ್ನು ಬಳಸಿಕೊಳ್ಳುತ್ತಿದೆ. ಹೆಸರಿಗೆ ಭ್ರಷ್ಟಾಚಾರ ನಿಗ್ರಹ ದಳ ಆರಂಭಿಸಿದ್ದರೂ ಭ್ರಷ್ಟಾಚಾರದ ದಾಖಲೆಗಳನ್ನು ನಾಶ ಮಾಡಲು ಇದೇ ಸಂಸ್ಥೆಯನ್ನು ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದರು.

ಭ್ರಷ್ಟ ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರನ್ನು ಈ ರೀತಿ ರಕ್ಷಿಸುತ್ತಿರುವುದನ್ನು ನೋಡಿದರೆ ತನ್ನ ಹಗರಣಗಳು ಬಯಲಿಗೆ ಬರಬಹುದು ಎಂದು ರಾಜ್ಯ ಸರ್ಕಾರವೇ ಭಯಪಡುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಕೆಪಿಎಸ್ಸಿಯ ಶ್ಯಾಂ ಭಟ್ ಅವರು ಕಪ್ಪು ಕಾಣಿಕೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಇಂಥವರು ಒಳ್ಳೆಯ ಆಡಳಿತ ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಶೆಟ್ಟರ್, ಕೆಪಿಎಸ್ಸಿಯಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದ ಸುಬೋಧ್ ಯಾದವ್ ಅವರನ್ನು ವರ್ಗಾವಣೆ ಮಾಡಿ ಶ್ಯಾಂ ಭಟ್ ಅವರನ್ನು ನೇಮಿಸುವ ಮೂಲಕ ರಾಜ್ಯ ಸರ್ಕಾರವೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Leave a Reply

comments

Related Articles

error: