ಮೈಸೂರು

ಮೊರಾರ್ಜಿ ಬೋಧಕ ಬೋಧಕೇತರ ಹುದ್ದೆಗಳಿಗೆ ಪರೀಕ್ಷೆ : ನಿಷೇಧಾಜ್ಞೆ

ಮೈಸೂರಿನಲ್ಲಿ ಡಿ.29ರಿಂದ ನಾಲ್ಕು ದಿನಗಳ ಕಾಲ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೆಜುಗಳಲ್ಲಿ ಗ್ರೂಪ್ ಎ, ಬಿ ಮತ್ತು ಸಿ ವೃಂದದ ಬೋಧಕ ಬೋಧಕೇತರ ಹುದ್ದೆಗಳಿಗೆ 5 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ನಡೆಯುವ ಸ್ಥಳದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡಿ.29 ರಂದು ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ 200 ಮೀ. ವ್ಯಾಪ್ತಿ ಪ್ರದೇಶವನ್ನು ಪರೀಕ್ಷೆ ನಡೆಯುವ ನಾಲ್ಕು ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ನಿಷೇಧಿತ ಪ್ರದೇಶವೆಂದು ನಗರ ಪೊಲೀಸ್ ಆಯುಕ್ತ ಡಾ. ಸುಬ್ರಹ್ಮಣ್ಯೇಶ್ವರರಾವ್ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಬಳಿಯಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ತೆರೆಯದಂತೆ ಸೂಚಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗಳು ಹೊರತು ಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಆಕ್ಷೇಪಾರ್ಹ ವಸ್ತುಗಳನ್ನು ಯಾರೂ ಕೊಂಡೊಯ್ಯಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

comments

Related Articles

error: