ಮೈಸೂರು

ಡಿ.29 : ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.29ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿ.29ರಂದು ಬೆಳಿಗ್ಗೆ ಅವರು 10.05ಕ್ಕೆ ಮೈಸೂರು ವಿಮಾನ ನಿಲ್ದಾಣ ಮಂಡಕಳ್ಳಿಗೆ ಆಗಮಿಸುವರು. ನಂತರ 10.30ಕ್ಕೆ ನಂಜನಗೂಡಿನಲ್ಲಿ ನಂಜನಗೂಡು ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 2ಗಂಟೆಗೆ ಕಡಕೊಳ ಕೆಪಿಟಿಸಿಎಲ್ ಅತಿಥಿ ಗೃಹದಲ್ಲಿದ್ದು, ನಂಜನಗೂಡು ರಸ್ತೆಯ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಿ ಮಧ್ಯಾಹ್ನ 2.45ಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಸ್ವಾಗತಿಸಲಿದ್ದಾರೆ. ಮಧ್ಯಾಹ್ನ 3.15ಕ್ಕೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ 17ನೇ ರಾಷ್ಟ್ರೀಯ ಜಾಂಬೂರಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.45ಕ್ಕೆ ಮೈಸೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Leave a Reply

comments

Related Articles

error: