ಸುದ್ದಿ ಸಂಕ್ಷಿಪ್ತ

ಪ್ರತಿಭಟನೆ: ಕಬ್ಬು ಬೆಳೆಗಾರರ ವಿರುದ್ಧ ದೂರು ದಾಖಲು

ಕಬ್ಬು ಬೆಳೆಗಾರರು ಪೂರ್ವಾನುಮತಿಯಿಲ್ಲದೇ ಸೋಮವಾರದಂದು ಸಹಕಾರ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಮನೆ ಮುಂದೆ ಧರಣಿ ಪ್ರತಿಭಟನೆ ನಡೆಸಿದ ಆರೋಪದಡಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಡಿ.26ರ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ .30ರವರೆಗೂ ಕುವೆಂಪು ನಗರದಲ್ಲಿರುವ ಸಚಿವರ ಮಹದೇವ ಪ್ರಸಾದ್ ಮನೆ ಮುಂದೆ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆಗೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆಯಿಂದ ಹಾಗೂ ಪೊಲೀಸ್ ಠಾಣೆಯಿಂದ ಅನುಮತಿಯನ್ನು ಪಡೆಯದೆ ರಸ್ತೆಯ ಮಧ್ಯೆ ಭಾಗದಲ್ಲಿ ಶಾಮಿಯಾನ ಹಾಕಿ ಸಾರ್ವಜನಿಕ ಜನಜೀವನವನ್ನು ಅವ್ಯವಸ್ಥೆಗೊಳಿಸಿದ್ದಾರೆಂದು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪೂರ್ವಾನುಮತಿ ಇಲ್ಲದೆ ಪ್ರತಿಭಟನೆ ಧರಣಿ ನಡೆಸುವುದು ಕಾನೂನು ಬಾಹಿರವೆಂದು ಕುವೆಂಪು ನಗರ ಪೊಲೀಸ್ ಇನ್‍ಸ್ಪೆಕ್ಟರ್ ತಿಳಿ ಹೇಳಿದರು ಪೊಲೀಸರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅವಾಚ್ ಪದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ದೂರು ದಾಖಲಿಸಲಾಗಿದೆ.

 

Leave a Reply

comments

Related Articles

error: