
ಮೈಸೂರು
ದಸರಾ ಮಹೋತ್ಸವ ಉದ್ಘಾಟನೆಯ ಸಮಯ ನಿಗದಿ
ಮೈಸೂರು,ಅ.8:- ಮೈಸೂರು ದಸರಾ ಮಹೋತ್ಸವ 2018ರ ಉದ್ಘಾಟನಾ ಸಮಯ ನಿಗದಿಯಾಗಿದ್ದು, ಅಕ್ಟೋಬರ್ 10ರ ಬುಧವಾರ ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 7.05 ರಿಂದ 07.35 ರ ವರೆಗೆ ಸಲ್ಲುವ ತುಲಾ ಲಗ್ನದಲ್ಲಿ ದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ.
ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವವನ್ನು ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ನಾರಾಯಣ ಮೂರ್ತಿ ನೆರವೇರಿಸಲಿದ್ದಾರೆ.
ದಸರಾ ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಸಂಪುಟದ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ. (ಕೆ.ಎಸ್,ಎಸ್.ಎಚ್)