ಸುದ್ದಿ ಸಂಕ್ಷಿಪ್ತ

ಬುದ್ಧಿ ಮಾಂದ್ಯತೆ ಜಾಗೃತಿಗಾಗಿ ಜೆಎಸ್ಎಸ್ ವೈದ್ಯಕೀಯ ವಿದ್ಯಾರ್ಥಿಗಳಿಂದ ‘ಪರ್ಪಲ್ ರನ್’ ನಾಳೆ

ಮೈಸೂರು,ಅ.10 : ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ವತಿಯಿಂದ ಬುದ್ಧಿ ಮಾಂದ್ಯತೆ ಜಾಗೃತಿಗಾಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಂದ ‘ಪರ್ಪಲ್ ರನ್’ ಅನ್ನು ನಾಳೆ ಬೆಳಗ್ಗೆ 9.30ಕ್ಕೆ ಜೆಎಸ್ಎಸ್ ಆಸ್ಪತ್ರೆಯ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸಭಾಂಗಣದಿಂದ ಏರ್ಪಡಿಸಲಾಗಿದೆ.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ, ಮುಖ್ಯ ಅತಿಥಿಯಾಗಿ ಶಾರದ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಹನುಮಂತಾಚಾರ್ ಜೋಷಿ ಇರಲಿದ್ದಾರೆ. ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಡಾ.ಎಂ.ದಯಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ವೈದ್ಯಕೀಯ ಮುಖ್ಯಸ್ಥ ಡಾ.ಎಂ.ಗುರುಸ್ವಾಮಿ, ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರಾದ ಡಾ.ಹೆಚ್.ಬಸವನಗೌಡಪ್ಪ ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: