ಕರ್ನಾಟಕಪ್ರಮುಖ ಸುದ್ದಿ

ಲೋಕಸಭೆಯ ಮಂಡ್ಯ ಕ್ಷೇತ್ರ : ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿದ್ದರಾಮಯ್ಯ ಹೆಸರು ಘೋಷಣೆ!

ಬೆಂಗಳೂರು (ಅ.11): ಲೋಕಸಭೆಯ ಮಂಡ್ಯ ಕ್ಷೇತ್ರದ ಉಪ ಚುನಾವಣೆಯಲ್ಲಿ ವಾಣಿಜ್ಯ ಇಲಾಖೆಯ ನಿವೃತ್ತ ಅಧಿಕಾರಿ ಡಾ.ಸಿದ್ದರಾಮಯ್ಯ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದರೊಂದಿಗೆ ಕಾಂಗ್ರೆಸ್-ಜೆಡಿಎಸ್ ಪ್ರಾಬಲ್ಯದ ಕ್ಷೇತ್ರದಲ್ಲಿ ಬಿಜೆಪಿಯೇ ಮೊದಲು ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದಂತಾಗಿದೆ.

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಡಾ.ಸಿದ್ದರಾಮಯ್ಯ ಹಾಗೂ ಕೆಲವು ಮುಖಂಡರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಡಾ.ಸಿದ್ದರಾಮಯ್ಯ ಅವರೇ ಮುಂಬರುವ ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಪಕ್ಷದ ಚುನಾವಣಾ ಸಮಿತಿಗೆ ಅವರ ಹೆಸರನ್ನು ಕಳುಹಿಸಿಕೊಡಲಾಗುವುದು. ಅವರೇ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ. ಕಾರ್ಯಕರ್ತರೆಲ್ಲರೂ ಒಗ್ಗೂಡಿ ಚುನಾವಣೆಯಲ್ಲಿ ಗೆಲುವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

(ಎನ್.ಬಿ)

Leave a Reply

comments

Related Articles

error: