ಪ್ರಮುಖ ಸುದ್ದಿ

ಮುಂದುವರಿದ ಅಕ್ರಮ ಗಣಿಗಾರಿಕೆ : ಜಿಲ್ಲಾಧಿಕಾರಿಗಳ ಆದೇಶಕ್ಕೂ ಬೆಲೆ ಇಲ್ಲ

ರಾಜ್ಯ(ಮಂಡ್ಯ)ಅ.12:-  ಸಕ್ಕರೆನಾಡಿನಲ್ಲಿ  ಜಿಲ್ಲಾಧಿಕಾರಿಗಳ ಆದೇಶಕ್ಕೂ ಬೆಲೆ ಇಲ್ಲದಂತಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಮುಂದುವರಿದಿದೆ.

ನಿಷೇಧಾಜ್ಞೆ  ಆದೇಶವಿದ್ದರೂ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ರಾತ್ರಿ ವೇಳೆ ಬೇಬಿ ಬೆಟ್ಟದ ಗಣಿಗಾರಿಕೆ ಕ್ವಾರೆಗಳು ರನ್ ಆಗುತ್ತಿವೆ ಎನ್ನಲಾಗಿದೆ. ಕ್ವಾರೆಗಳಲ್ಲಿ ಕೆಲಸ  ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎನ್ನಲಾಗಿದೆ. ಮೊನ್ನೆಯಷ್ಟೆ ಜಿಲ್ಲಾಡಳಿತ ಬೇಬಿ ಬೆಟ್ಟದ ಸುತ್ತಮುತ್ತಲ ಪ್ರದೇಶದಲ್ಲಿ ಗಣಿಗಾರಿಕೆಗೆ ಸಂಪೂರ್ಣ ನಿಷೇಧ ಹೇರಿತ್ತು. ಕ್ವಾರೆ ಮಾಲೀಕರೊಂದಿಗೆ ಪೊಲೀಸ್ ಇಲಾಖೆ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ರಾಜಕೀಯ ಪ್ರಭಾವಿ ವ್ಯಕ್ತಿಗಳ ಮಾಲೀಕತ್ವದಲ್ಲಿ ಕಲ್ಲು  ಕ್ವಾರೆಗಳಲ್ಲಿ ಕೆಲಸ ನಡೆಯುತ್ತಿದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: