ಮೈಸೂರು

ವಿಶ್ವಮಾನವ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳಿಗೆ ಚಾಲನೆ

ಮೈಸೂರಿನ ಜಯಲಕ್ಷ್ಮಿಪುರಂನ ಶ್ರೀಕುವೆಂಪು ವಿದ್ಯಾವರ್ಧಕ ಟ್ರಸ್ಟ್ ನ ವೆಂಕಣ್ಣಯ್ಯ ವೇದಿಕೆ ಸಭಾಂಗಣದಲ್ಲಿ ಕುವೆಂಪು ಅವರ 113ನೇ ಜಯಂತಿ ಮತ್ತು ವಿಶ್ವಮಾನವ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಮತ್ತು ದೇಜಗೌ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ  ಆಯೋಜಿಸಲಾದ ವಿವಿಧ ಸ್ಪರ್ಧೆಗಳಿಗೆ ಟ್ರಸ್ಟ್ ನ ಅಧ್ಯಕ್ಷ ಡಾ.ಶಶಿಧರ ಪ್ರಸಾದ್ ಚಾಲನೆ ನೀಡಿದರು. ಈ ಸಂದರ್ಭ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ರಸಪ್ರಶ್ನೆ, ಭಾವಗೀತೆ ಸೇರಿದಂತೆ ಹಲವು ವಿಷಯಗಳಲ್ಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಮೈಸೂರಿನ ವಿವಿಧ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: