ದೇಶ

`ತಿತ್ಲಿ’ ಚಂಡಮಾರುತಕ್ಕೆ 12 ಬಲಿ

ಭುವನೇಶ್ವರ,.13-‘ತಿತ್ಲಿಚಂಡಮಾರುತದ ಪರಿಣಾಮ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಒಡಿಶಾದ ಗಜಪತಿ ಜಿಲ್ಲೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ.

ಭಾರೀ ಮಳೆಯಾಗುತ್ತಿದ್ದುದರಿಂದ ಕೆಲ ಗ್ರಾಮಸ್ಥರು ಗುಹೆಯೊಂದರಲ್ಲಿ ಆಶ್ರಯ ಪಡೆದಿದ್ದರು. ಇದೇ ಸಂದರ್ಭ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಾಲ್ವರು ನಾಪತ್ತೆಯಾಗಿದ್ದು, ಇವರೆಲ್ಲರೂ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: