ಸುದ್ದಿ ಸಂಕ್ಷಿಪ್ತ
ಅ.15 : ಕ್ಲೀನ್ ಕಾವೇರಿ
ಮಡಿಕೇರಿ,ಅ.13:- ಗ್ರೀನ್ ಸಿಟಿ ಫೋರಂ ಸಂಘಟನೆ ಮುಂದಾಳತ್ವದಲ್ಲಿ ಆ.15 ರಂದು ಕ್ಲೀನ್ ಕಾವೇರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಫೋರಂ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.17 ರಂದು ನಡೆಯುತ್ತಿರುವ ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ತಲಕಾವೇರಿ ಕ್ಷೇತ್ರದಿಂದ ಭಗಂಡೇಶ್ವರ ಕ್ಷೇತ್ರದವರೆಗೆ ಶ್ರಮದಾನದ ಮೂಲಕ ಸ್ವಚ್ಛತೆ ಮಾಡಲು ನಿರ್ಧರಿಸ ಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ತಲಕಾವೇರಿ ಕ್ಷೇತ್ರದಲ್ಲಿ ಸ್ವಚ್ಛತೆ ಪ್ರಾರಂಭಿಸಲಾಗುತ್ತದೆ. ಕಳೆದ ವರ್ಷ ಇದೇ ರೀತಿಯಲ್ಲಿ ಕ್ಷೇತ್ರದ ಸ್ವಚ್ಛತೆ ಮಾಡಲಾಗಿತ್ತು. ವಿವಿಧ ಸಂಘ, ಸಂಸ್ಥೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರ, ಭಕ್ತರು ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. (ಕೆಸಿಐ,ಎಸ್.ಎಚ್)