ಪ್ರಮುಖ ಸುದ್ದಿಮೈಸೂರು

ಕುವೆಂಪು ಬುದ್ಧಿವಂತಿಕೆಯನ್ನು ಅಳವಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ : ಡಾ.ಹೆಚ್.ಸಿ.ಮಹದೇವಪ್ಪ

ಕುವೆಂಪು ಅವರ ವಿಚಾರವಂತಿಕೆ, ಬುದ್ಧಿವಂತಿಕೆಯನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಮೈಸೂರು ಮಹಾನಗರಪಾಲಿಕೆ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗುರುವಾರ ಮೈಸೂರಿನ ವಿಶ್ವಮಾನವ ಉದ್ಯಾನವನದಲ್ಲಿ ಆಯೋಜಿಸಲಾದ ರಾಷ್ಟ್ರಕವಿ ಕುವೆಂಪು ಅವರ 112ನೇ ಜನ್ಮದಿನಾಚರಣೆ ಹಾಗೂ ಗೀತಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಯಾನವನದಲ್ಲಿದ್ದ ಕುವೆಂಪು ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅದ್ಭುತ ಕೊಡುಗೆಗಳನ್ನು ಕೊಟ್ಟಿದ್ದಾರೆ. ಅವರ ಕೃತಿಗಳು, ನಾಟಕಗಳು ಇಂದಿಗೂ ಜನಮಾನಸದಲ್ಲಿದೆ. ಏನಾದರೂ ಆಗು ಮೊದಲು ಮಾನವನಾಗು ಮಾನವತೆಯ ಸಾರವನ್ನು ತಿಳಿಸಿದ್ದಾರೆ.  ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಮೂಲಕ ಅವರಿಗೆ ಕನ್ನಡದ ಕುರಿತು ಇರುವ ಅಭಿಮಾನವನ್ನು ಎತ್ತಿ ತೋರಿಸಿದ್ದಾರೆ ಎಂದರು.

ಕುವೆಂಪು ಅವರ ವಿಚಾರವಂತಿಕೆ, ಸೃಜನಶೀಲತೆ, ಬುದ್ಧಿವಂತಿಕೆಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದು ತಿಳಿಸಿದರು.

ಈ ಸಂದರ್ಭ ಪಾಲಿಕೆಯ ಮೇಯರ್ ಎಂ.ಜೆ.ರವಿಕುಮಾರ್, ಶಾಸಕ ಎಂ.ಕೆ.ಸೋಮಶೇಖರ್, ಕರ್ನಾಟಕ ರಾಜ್ಯ ಮುಕ್ತವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎ.ರಂಗಸ್ವಾಮಿ, ಸಂಸದ ಧ್ರುವನಾರಾಯಣ  ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: