ಮೈಸೂರು

ಸ್ವಚ್ಛ ಪರಿಸರಕ್ಕೆ ಪ್ರಥಮ ಆದ್ಯತೆ ನೀಡಬೇಕು : ವನೀತ್ ಕುಮಾರ್

ಮೈಸೂರು, ಅ.15:- ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಕನಸಾಗಿದ್ದ ಸ್ವಚ್ಛ ಪರಿಸರಕ್ಕೆ ಪ್ರಥಮ ಆದ್ಯತೆ ನೀಡಬೇಕೆಂದು ಗೋಣಿಕೊಪ್ಪ ಕಾವೇರಿ ಪದವಿ ಕಾಲೇಜಿನ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪುರಸ್ಕೃತ ವನೀತ್ ಕುಮಾರ್ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಬಸಲಾಪುರ ಗ್ರಾಮದಲ್ಲಿ ಪಟ್ಟಣದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ವತಿಯಿಂದ ಇತ್ತೀಚೆಗೆ  ಹಮ್ಮಿಕೊಂಡಿದ್ದ ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಿ ಸ್ವಚ್ಛತೆಯಲ್ಲಿ ಯುವಜನತೆ ಎಂಬ ವಿಷಯದ ಉಪನ್ಯಾಸ ನೀಡಿ ಮಾತನಾಡಿದರು.  ದೇಶದ ಭವಿಷ್ಯ ಯುವಜನರ ಕೈಯಲ್ಲಿದ್ದು ಯುವಜನತೆ ಮನಸ್ಸು ಮಾಡಿದರೆ ದೇಶದ ಪ್ರಗತಿ ಸಾಧ್ಯ . ಯುವಜನತೆ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಉತ್ತಮವಾಗಿ ಇಟ್ಟುಕೊಂಡಾಗ ಮಾತ್ರ ಉತ್ತಮ ಆರೋಗ್ಯವಂತರಾಗಿ ಬಾಳಬಹುದು ಎಂದರು . ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಹೆಚ್ಚಿನ ದುಷ್ಪರಿಣಾಮಗಳಾಗುತ್ತಿದ್ದು, ನಾವೆಲ್ಲರೂ ಜಾಗೃತರಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೆ ನಿಷೇಧಿಸಬೇಕಿದೆ ಎಂದರು .

ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಗೌರವಾಧ್ಯಕ್ಷ ಎನ್.ಎಲ್ ಗಿರೀಶ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಕಸದ ಸಮಸ್ಯೆ ಹೆಚ್ಚುತ್ತಿದ್ದು ಹೊರ ದೇಶಗಳಲ್ಲಿರುವಂತೆ ಕಸವನ್ನು ಸಂರಕ್ಷಿಸಿ ಪುನರ್ ಬಳಸುವ ತಂತ್ರಜ್ಞಾನವನ್ನು ಭಾರತ ದೇಶದಲ್ಲಿಯೂ ಅಳವಡಿಸಿಕೊಂಡಾಗ ಕಸದ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದರು . ಮನುಷ್ಯ ಜ್ಞಾನದ ಅರಿವಿಲ್ಲದೆ ತನ್ನಿಂದ ತಾನೇ ವಿನಾಶವನ್ನು ಮೈಮೇಲೆ ಎಳೆದು ಕೊಳ್ಳುತ್ತಿರುವುದು ವಿಷಾದಕರ ಸಂಗತಿಯಾಗಿದ್ದು ಮುಂದಿನ ದಿನಗಳಲ್ಲಾದರೂ ಎಚ್ಚೆತ್ತುಕೊಂಡು ಉತ್ತಮ ಪರಿಸರ ರೂಪಿಸಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ ಎಂದರು .

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೆ.ಆರ್ ಪ್ರವೀಣ್ ಶಿಕ್ಷಕರಾದ ಪ್ರಕಾಶ್ ಮಾತನಾಡಿದರು .

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಪ್ರೀತು, ಶಿಕ್ಷಕ ವಿಠಲ್ ರಾವ್ ಕದಂಬ, ಅಳಿಲು ಸೇವಾ ಸಂಸ್ಥೆ ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ , ಶಿಬಿರಾಧಿಕಾರಿಗಳಾದ ಬಸಲಾಪುರ ಆನಂದ್, ದೀಪಾ, ರೂಪಾ, ಪ್ರತಾಪ್, ಮೂರ್ತಿ, ಗಿರಿ, ಪಲ್ಲವಿ, ಹಾಗೂ ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: