ಕರ್ನಾಟಕಪ್ರಮುಖ ಸುದ್ದಿ

ಸಿದ್ದರಾಮಯ್ಯ ಜೊತೆ ಒಟ್ಟಾಗಿ ಪ್ರಚಾರ ಮಾಡುತ್ತೇವೆ ಅಂದ್ರು ದೇವೇಗೌಡರು

ಬೆಂಗಳೂರು (ಅ.15): ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡು ಉಪಚುನಾವಣೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಒಟ್ಟಾಗಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತೇವೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ನಾನು ಈ ಬಾರಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒಟ್ಟಾಗಿ ಪ್ರಚಾರ ನಡೆಸುತ್ತೇವೆ ಎಂದರು.

ಈಗಾಗಲೇ ಮಂಡ್ಯ, ರಾಮನಗರ, ಶಿವಮೊಗ್ಗ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡಲಾಗಿದ್ದು, ಜಮಖಂಡಿಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿರುವುದರಿಂದ ಆ ಕ್ಷೇತ್ರವನ್ನು ಬಿಟ್ಟುಕೊಡಲಾಗಿದೆ. ಇಂದು, ನಾಳೆಯೊಳಗೆ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. (ಎನ್.ಬಿ)

Leave a Reply

comments

Related Articles

error: