ಪ್ರಮುಖ ಸುದ್ದಿ

ಪಾರ್ವತಿ ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ

ರಾಜ್ಯ(ಮಡಿಕೇರಿ)ಅ.16:- ಸೋಮವಾರಪೇಟೆಯ ಸೋಮೇಶ್ವರ ದೇವಾಲಯದಲ್ಲಿ ಶ್ರೀ ಶಕ್ತಿ ಪಾರ್ವತಿ ಸನ್ನಿಧಿಯಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪಾರ್ವತಿ ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ ಮಾಡಲಾಗಿತ್ತು.

ನಂತರ ಸಂಜೆ 6-30ಕ್ಕೆ ಅರ್ಚಕ ಪ್ರಸನ್ನಭಟ್ ನೇತೃತ್ವದಲ್ಲಿ ಲಲಿತ ಸಹಸ್ರನಾಮ, ಕುಂಕುಮಾರ್ಚನೆ, ರಂಗ ಪೂಜೆ ನಡೆದು 8-30ಕ್ಕೆ ಮಹಾ ಮಂಗಳಾರತಿ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: