ಸುದ್ದಿ ಸಂಕ್ಷಿಪ್ತ

ಅ.17ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಮೈಸೂರು,ಅ. 16 : ಜೆಎಸ್ಎಸ್ ಕಾಲೇಜು ಆಫ್ ಫಾರ್ಮಸಿ, ಜೆಎಸ್ಎಸ್ ಉನ್ನತ ಶಿಕ್ಷಣ ಅಕಾಡೆಮಿ ಮತ್ತು ಸಂಶೋಧನಾ ಸಂಸ್ಥೆಯ ಔಷಧ ಶಾಸ್ತ್ರ ವಿಭಾಗದ ‘ಗಿಡಮೂಲಿಕೆ ಔಷಧಿಗಳ ಇತ್ತೀಚೆನ ಸಂಶೋಧನೆ’ಗಳು ವಿಷಯವಾಗಿ ರಾಷ್ಟ್ರೀಯ ವಿಚಾರ ಸಂಕಿರಣವನನ್ನು ಅ.17ರಂದು ಜೆಎಸ್ಎಸ್ ಕಾಲೇಜ್ ಆಫ್ ಫಾರ್ಮಸಿಯ ಶ್ರೀ ರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಜೆಎಸ್ಎಸ್ ಉನ್ನತ ಶಿಕ್ಷಣ ಅಕಾಡೆಮಿ ಮತ್ತು ಸಂಶೋಧನಾ ಸಂಸ್ಥೆಯ  ಕುಲಪತಿ ಡಾ.ಬಿ.ಸುರೇಶ್ ಉದ್ಘಾಟಿಸಲಿದ್ದಾರೆ. ಆಯುಷ್ ಇಲಾಖೆಯ ಮಾಜಿ ನಿರ್ದೇಶಕ ಪ್ರೊ.ಆರ್.ಎಸ್.ರಾಮಸ್ವಾಮಿ ಮುಖ್ಯ ಅತಿಥಿಯಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಎಂ.ಪ್ರಮೋದ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: