ಮೈಸೂರು

ಮೈಸೂರು ಅರಮನೆಯ ಇಬ್ಬರು ಸದಸ್ಯರ ಆರೋಗ್ಯದಲ್ಲಿ ವ್ಯತ್ಯಯ

ಮೈಸೂರು,ಅ.18:- ಮೈಸೂರು ಅರಮನೆಯ ಇಬ್ಬರು ಸದಸ್ಯರ ಆರೋಗ್ಯದಲ್ಲಿ ವ್ಯತ್ಯಯವುಂಟಾಗಿದೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್  ಅವರ ಕೊನೆಯ ತಂಗಿ ವಿಶಾಲಾಕ್ಷಿದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಜತೆಗೆ ರಾಜಮಾತೆ ಪ್ರಮೋದಾವೇವಿ ಒಡೆಯರ್  ಅವರ ತಾಯಿ ಪುಟ್ಟ ಚಿನ್ನಮ್ಮಣ್ಣಿಯವರ ಆರೋಗ್ಯದಲ್ಲೂ ವ್ಯತ್ಯಯವಾಗಿದೆ ಎನ್ನಲಾಗಿದೆ.

ಮೈಸೂರು ರಾಜವಂಶಸ್ಥೆ ವಿಶಾಲಾಕ್ಷಿದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ರಮ್  ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ನಿವಾಸಿಯಾಗಿರುವ ಮೈಸೂರು ರಾಜಮನೆತನದ ವಿಶಾಲಾಕ್ಷಿದೇವಿ ಅವರು ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ  ಆರೋಗ್ಯದಲ್ಲಿ ಏರುಪೇರು ಉಂಟಾಗಿ  ಪರಿಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರನ್ನು ತೀವ್ರ ನಿಗಾಘಟಕದಲ್ಲಿರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಮನೆ ಮೂಲಗಳು ತಿಳಿಸಿವೆ.

ಅದೇ ರೀತಿ  ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ 98 ವರ್ಷದ ಪುಟ್ಟ ಚಿನ್ನಮ್ಮಣ್ಣಿ ಅವರ ಆರೋಗ್ಯದಲ್ಲೂ ಏರುಪೇರಾಗಿದೆ. ಅವರನ್ನು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಕೆಲ ತಿಂಗಳುಗಳ ಹಿಂದೆಯೂ ಸಹ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟ ಚಿನ್ನಮ್ಮಣ್ಣಿ ಅವರನ್ನು ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಅರಮನೆ ಆಯುಧಪೂಜೆ ಮುಗಿದಿದೆ. ನಾಳೆ ವಿಜಯದಶಮಿ ಆಚರಣೆಯಲ್ಲಿಯೂ ಯಾವುದೇ ವ್ಯತ್ಯಯ ಇಲ್ಲ. ನವರಾತ್ರಿ ಕಾರ್ಯಕ್ರಮಗಳು ಸಂಪ್ರದಾಯದಂತೆ ನಡೆಯಲಿವೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: