ಮೈಸೂರು

ಜಂಬೂಸವಾರಿಯನ್ನು ವೀಕ್ಷಿಸಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮೈಸೂರು, ಅ.20:- ಜಂಬೂಸವಾರಿಯನ್ನು ವೀಕ್ಷಿಸಲು ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೆ.ಆರ್.ವೃತ್ತದ ಬಳಿ ನಡೆದಿದೆ.

ನಿನ್ನೆ ಕೆ.ಆರ್.ವೃತ್ತದ ಬಳಿ ಇರುವ ಚಿಕ್ಕ ಗಡಿಯಾರದ ಹತ್ತಿರ ಜಂಬೂ ಸವಾರಿ ವೀಕ್ಷಿಸುತ್ತಿದ್ದ ವ್ಯಕ್ತಿಯೋರ್ವರು ಸಾಯಂಕಾಲ 4.15ರ ಸುಮಾರಿಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ನಗರಪಾಲಿಕೆಯ ವಾಹನದಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಂಬೂ ಸವಾರಿ ಸಾಗುವ ಮಾರ್ಗಮಧ್ಯದಲ್ಲಿ ಆರೋಗ್ಯ ಇಲಾಖೆಯು 10ಆ್ಯಂಬುಲೆನ್ಸ್ ಗಳನ್ನು ನಿಯೋಜಿಸಿತ್ತು. ಆದರೆ ಜನಜಂಗುಳಿ ಹೆಚ್ಚಿದ್ದ ಕಾರಣ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವುದು ತಡವಾಯಿತು. ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಅವರ ಪ್ರಾಣ ಹಾರಿ ಹೋಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: