ಮೈಸೂರು

ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ವೇಳೆ ಮೊಬೈಲ್ ಕಸಿದು ಪರಾರಿ

ಮೈಸೂರು,ಅ.22:- ವ್ಯಕ್ತಿಯೋರ್ವರು ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತನೋರ್ವ ಅವರ ಮೊಬೈಲ್ ಕಸಿದು ಪರಾರಿಯಾದ ಘಟನೆ ಅಎಮನೆಯ ಮುಂಭಾಗ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

ದೇವರಾಜ ಮೊಹಲ್ಲಾ ನಿವಾಸಿ ಶಿವರಾಜು ಎಂಬವರು ಶನಿವಾರ ಮಧ್ಯಾಹ್ನ ತಮ್ಮ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದರು. ಇದೇ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಅವರ ಮೇಲೆ ದಾಳಿ ನಡೆಸಿ ಮೊಬೈಲ್ ಕಸಿದು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: