ಪ್ರಮುಖ ಸುದ್ದಿಮೈಸೂರು

ನಗರದಲ್ಲಿ ಗ್ರಾಮ ಪಂಚಾಯತಿ ನೌಕರರ 7ನೇ ರಾಜ್ಯ ಸಮ್ಮೇಳನ

ಅ.27 ರಿಂದ 29ರವರೆಗೆ

ಮೈಸೂರು, ಅ.22 : ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ‘ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ 7ನೇ ರಾಜ್ಯ ಸಮ್ಮೇಳನ’ವನ್ನು ಮೂರು ದಿನಗಳ ಕಾಲ ನಗರದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಬಸವರಾಜು ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ದಿವಾನ್ ಪೂರ್ಣಯ್ಯ ಸ್ಮಾರಕ ಭವನದಲ್ಲಿ ಅಕ್ಟೋಬರ್ 27 ರಿಂದ 29 ರವರೆಗೆ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

ಅ.27ರ ಬೆಳಗ್ಗೆ 10 ಗಂಟೆಗೆ ಶಾಂತಲಾ ಟಾಕೀಸ್ ಮುಂಭಾಗದ ಸ್ವಾತಂತ್ರ ಹೋರಾಟಗಾರರ ಉದ್ಯಾನವನದಿಂದ ಪುರಭವನದವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ, ನಂತರ ಪುರಭವನದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ, ಉಪಾಧ್ಯಕ್ಷ ವಿ.ಪಿ.ಕುಲಕರ್ಣಿ, ಅರಳಿಹಳ್ಳಿ ಗೋಪಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ನಾಡಗೌಡ ಮಂಟನಗೌಡ ಭಾಗಿಯಾಗಲಿದ್ದಾರೆ.

ಅ.28 ರಂದು ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ಕೇಂದ್ರ ಸರ್ಕಾರದ ಧೋರಣೆ ಕುರಿತು ವಿಚಾರ ಸಂಕಿರಣ ನಡೆಯಲಿದ್ದು ಸಚಿವ ಕೃಷ್ಣ ಬೈರೇಗೌಡ, ಮಾಜಿ ಸಚಿವ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ  ಪಾಲ್ಗೊಳ್ಳಲಿದ್ದಾರೆ.

ಅ 29 ರಂದು ಸಮ್ಮೇಳನದ ನಡೆಯುವ ಸಮಾರೋಪ ಸಮಾರಂಭದಲ್ಲಿ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತಿಕ್, ಕಾರ್ಯದರ್ಶಿ ಸಾವಿತ್ರಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

.ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಜಿ.ಜಯರಾಂ,ಲೋಕೇಶ್, ರಾಮಕೃಷ್ಣಪ್ಪ,ಹಿನಕಲ್ ಚನ್ನಪ್ಪ ಉಪಸ್ಥಿತರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: