ಮೈಸೂರು

ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪಥ ಸಂಚಲನ

scout-2ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ 17ನೇ ರಾಷ್ಟ್ರೀಯ ಜಾಂಬೂರಿ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವಿವಿಧ ರಾಜ್ಯಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶುಕ್ರವಾರ ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಆಗಮಿಸಿ, ನಗರದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.

ಜಾಂಬೂರಿ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹರಿಯಾಣ, ಸಿಕ್ಕಿಂ, ಹಿಮಾಚಲಪ್ರದೇಶ, ಓಡಿಸ್ಸಾ, ಜಮ್ಮು-ಕಾಶ್ಮೀರ, ರಾಜಸ್ಥಾನ — ಹೀಗೆ ಹಲವು ರಾಜ್ಯಗಳಿಂದ ಆಗಮಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಮ್ಮ ರಾಜ್ಯದ ಉಡುಪನ್ನು ಧರಿಸಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭಿಸಿ ಅಶೋಕ ರಸ್ತೆ, ಇರ್ವಿನ್ ರಸ್ತೆ, ಎಸ್.ಆರ್.ರಸ್ತೆ, ದೇವರಾಜ ಅರಸು ರಸ್ತೆ, ಮೂಲಕ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯವರೆಗೆ ಬ್ಯಾಂಡ್ ಸೆಟ್ ಮೂಲಕ ಪಥಸಂಚಲನ ನಡೆಸಿದರು. ಕೆಲವರು ಕಾಲ್ನಡಿಗೆಯಲ್ಲಿ ಸಂಚರಿಸಿದರೆ, ಇನ್ನು ಕೆಲವರು ಸೈಕ್ಲಿಂಗ್ ಮಾಡಿಕೊಂಡು ಹೋಗುತ್ತಿರುವುದು ಕಂಡು ಬಂತು.

ಪಥಸಂಚಲದಲ್ಲಿ ಭಾರತದ ಏಕತೆಯನ್ನು ನಾವೆಲ್ಲ ಕಾಪಾಡಬೇಕು ಎನ್ನುವ ಘೋಷಣೆಗಳು ಕೇಳಿಬಂತು. ಸುಮಾರು ಐನೂರಕ್ಕೂ ಅಧಿಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಜೊತೆ ತರಬೇತು ಅಧಿಕಾರಿಗಳು  ಪಾಲ್ಗೊಂಡಿದ್ದರು.

Leave a Reply

comments

Related Articles

error: